ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಜು.8ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ ಒಡತಿ ಶ್ರೀ ರಾಜರಾಜೇಶ್ವರೀ ಅಮ್ಮನವರಿಗೆ ಲಕ್ಷ ಕುಂಕುಮಾರ್ಚನೆ ಸೇವೆ ನಡೆಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಯವರ ನೇತೃತ್ವದಲ್ಲಿ ಜರಗಿದ ಕುಂಕುಮಾರ್ಚನೆಯಲ್ಲಿ ಕ್ಷೇತ್ರದ ಪ್ರದಾನ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಪರಮೇಶ್ವರ ಭಟ್, ಕೆ.ರಾಮ್ ಭಟ್, ಸಹ ಅರ್ಚಕರಾದ ಪದ್ಮನಾಭ ಭಟ್, ಅನಂತಪದ್ಮನಾಭ ಭಟ್, ಆದರ್ಶ ಭಟ್ ಇವರ ಪೌರೋತ್ಯದಲ್ಲಿ ನಡೆಯಿತು. ಕ್ಷೇತ್ರದ ಭಕ್ತಾಧಿಗಳು ಪೂಜೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.