ವಿಟ್ಲ: ವಿಟ್ಲದ ಖಾಸಗಿ ಬಸ್ ನಿಲ್ದಾಣದ ಸಮೀಪ ಬಾಲಕನೋರ್ವ ತನ್ನ ಶಾಲಾ ಸಹಪಾಠಿಯೊಂದಿಗೆ ಮಾತನಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಬಾಲಕನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರದ ಎನ್ಮಕಜೆ ನಿವಾಸಿ ಪದ್ಮರಾಜ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ಶಾಲಾ ಸಹಪಾಠಿಯೊಂದಿಗೆ ವಿಟ್ಲದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪದ್ಮರಾಜ್ ಅಲ್ಲಿಗೆ ಬಂದು ಬಾಲಕನಿಗೆ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.