ಚಾಮರಾಜನಗರ: ಕೇವಲ ನ 4ನೇ ತರಗತಿಯ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಗುಂಡ್ಲುಪೇಟೆ ಪಟ್ಟಣದ ಕುರುಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭವಿಸಿದೆ.
ಮೂಲತಃ ತಾಲೂಕಿನ ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು ಹಾಗೂ ನಾಗರತ್ನ ಎಂಬುವವರ ಪುತ್ರ ಮನೋಜ್ ಕುಮಾರ್ (10) ಮೃತ ಬಾಲಕ.
ಈತ ದೊಡ್ಡಹುಂಡಿ ಗ್ರಾಮದಲ್ಲಿ ಒಂದು ಮತ್ತು ಎರಡನೇ ತರಗತಿ ವ್ಯಾಸಂಗ ಮಾಡಿ ಮೂರನೇ ತರಗತಿಗೆ ಪಟ್ಟಣದ ಕುರುಬಗೇರಿ ಹಿರಿಯ ಪ್ರಾಥ ಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದನು.
ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೇ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈತನಿಗೆ ಹೃದಯ ಸಂಬಂಧಿ ಕಾಯಿಲೆ ಇದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು ಎನ್ನಲಾಗಿದೆ.