ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಕರಾವಳಿ ಭಾಗದಲ್ಲಿ ಜು.10 ರಿಂದ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಬುಧವಾರ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಮೋಡದ ಕವಿದ ವಾತಾವರಣವಿತ್ತು.
ಉಡುಪಿ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ಬಿಸಿಲು ಕವಿದ ಮೋಡದ ವಾತಾವರಣ ಹಾಗೂ ಸಾಧಾರಣ ಮಳೆ ಸುರಿದಿದೆ .
ಉಡುಪಿ, ಮಣಿಪಾಲ, ಬೈಂದೂರು, ಕುಂದಾಪುರ, ಕೋಟ, ಬ್ರಹ್ಮಾವರ, ಮಲ್ಪೆ, ಕಾರ್ಕಳ, ಹೆಬ್ರಿ, ಶಿರ್ವ, ಪಡುಬಿದ್ರಿ, ಕಾಪು, ಉಚ್ಚಿಲ ಭಾಗಗಳಲ್ಲಿಯೂ ಸಾಧಾರಣ ಮಳೆ ಸುರಿದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕೆಲವು ದಿನ ಸಾಧಾರಣ ಮಳೆ ಸುರಿಯಲಿದೆ ಎನ್ನಲಾಗುತ್ತಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t