ಸಮುದ್ರದಲ್ಲಿ ದೋಣಿ ಮಗುಚಿ ದುರಂತ: ಓರ್ವ ಸಾವು, ಇನ್ನೋರ್ವ ನಾಪತ್ತೆ

ಭಟ್ಕಳ: ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿ ಓರ್ವ ಮೃತಪಟ್ಟು, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಇಂದು ಮಧ್ಯಾಹ್ನದ ಸುಮಾರಿಗೆ ಮುರ್ಡೇಶ್ವರದಲ್ಲಿ ಸಂಭವಿಸಿದೆ. ಮಾಧವ ಹರಿಕಾಂತ ಮೃತಪಟ್ಟವರು.

ಜನಾರ್ದನ ಎ. ಹರಿಕಾಂತ ಎಂಬವರಿಗೆ ಸೇರಿದ ಗೆಲ್ನೆಟ್ ದೋಣಿಯಲ್ಲಿ ಗುರುವಾರ ಬೆಳಿಗ್ಗೆ ಮುರ್ಡೇಶ್ವರದಿಂದ ನಾಲ್ವರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದೋಣಿ ಮಗುಚಿ ನಾಲ್ವರೂ ಸಮುದ್ರ ಪಾಲಾಗಿದ್ದರು. ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಮೀನುಗಾರರು ರಕ್ಷಣಾ ಕಾರ್ಯಾಚರಣೆಗಿಳಿದಿದ್ದರು. ಈ ಪೈಕಿ ಮಾಧವ ಹರಿಕಾಂತ ಎಂಬವರು ನೀರಿನಲ್ಲಿ ಮುಳುಗಿದ್ದು ತಕ್ಷಣ ಅವರನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿದ್ದಾರೆ. ಇನ್ನೋರ್ವ ಮೀನುಗಾರ ವೆಂಕಟೇಶ ಅಣ್ಣಪ್ಪ ಹರಿಕಾಂತ (26) ಎಂಬವರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಅವರ ಶೋಧ ಕಾರ್ಯ ನಡೆದಿದೆ.

ಆನಂದ ಅಣ್ಣಪ್ಪ ಹರಿಕಾಂತ ಹಾಗೂ ಇನ್ನೋರ್ವ ಮೀನುಗಾರ ದಡ ಸೇರಿದ್ದು ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಮುರ್ಡೇಶ್ವರ ಠಾಣೆಯ ಪೊಲೀಸರು, ಕರಾವಳಿ ಕಾವಲು ಪಡೆಯ ಪೊಲೀಸರು ಹಾಗೂ ಮೀನುಗಾರರು, ನಾಗರೀಕರು ಕಾರ್ಯಾಚರಣೆ ನಡೆಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!