ರೇಣುಕಾಸ್ವಾಮಿ ಹತ್ಯೆ ಕೇಸ್: ಕೋರ್ಟ್‌ ಗೆ ಬಾರದ ಪವಿತ್ರಾ ಗೌಡ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಧನರಾಜ್ ಮತ್ತು ಕಾರ್ತಿಕ್‌ ಇಂದು 64ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗದಿರುವ ಕಾರಣ ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಆಗಸ್ಟ್ 12ಕ್ಕೆ ಮುಂದೂಡಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಗಂಭೀರ ಆರೋಪಗಳಿದ್ದು ಸಾರ್ವಜನಿಕರ ಗಮನ ಸೆಳೆದಿದೆ. ಈ ಮಧ್ಯೆ ಪವಿತ್ರಾ ಗೌಡ ಸೇರಿದಂತೆ ಪ್ರಮುಖ ಆರೋಪಿಗಳು ಕೋರ್ಟ್‌ಗೆ ಗೈರಾಗಿರುವುದು ವಿಚಾರಣೆಯಲ್ಲಿ ವಿಳಂಬಕ್ಕೆ ಕಾರಣವಾಗಿದೆ.
ನ್ಯಾಯಾಲಯವು ಆರೋಪಿಗಳ ಗೈರುಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಿದ್ದು ಆಗಸ್ಟ್ 12ರಂದು ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಕೋರ್ಟ್‌ಗೆ ಹಾಜರಾಗಬೇಕೆಂದು ಸೂಚಿಸಿದೆ. ರೇಣುಕಾಸ್ವಾಮಿ ಕುಟುಂಬವು ನ್ಯಾಯಕ್ಕಾಗಿ ಕಾಯುತ್ತಿದ್ದು ಈ ವಿಚಾರಣೆಯ ಫಲಿತಾಂಶದ ಮೇಲೆ ಅವರ ಭರವಸೆಯಿಟ್ಟಿದ್ದಾರೆ.

error: Content is protected !!