ಉಡುಪಿ: ಗರುಡ ಗ್ಯಾಂಗ್‌ನ ಸದಸ್ಯ ಕಬೀರ್‌ ಗೂಂಡಾ ಕಾಯ್ದೆಯಡಿ ಬಂಧನ

ಉಡುಪಿ: ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್‌ ಅಲಿಯಾಸ್‌ ಕಬೀರ್‌ ಹುಸೇನ್‌ (46) ಎಂಬಾತನನ್ನು ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಗೂಂಡಾ ಕಾಯ್ದೆ ಅಡಿ ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಅಟ್ಟಲಾಗಿದೆ.

ಆತನು 2005ರಿಂದ ಇಲ್ಲಿಯ ತನಕ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಸಜೆಯಾಗಿದ್ದು, 8 ಪ್ರಕರಣಗಳಲ್ಲಿ ಖುಲಾಸೆ ಹೊಂದಿದ್ದಾನೆ. ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಯಲ್ಲಿ ಇರುತ್ತವೆ. ಉಳಿದ ಎರಡು ಪ್ರಕರಣಗಳು ಪೊಲೀಸ್‌ ತನಿಖೆಯಲ್ಲಿವೆ.

ಈತನು ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್‌ ಠಾಣೆಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾಗಿ ಪೊಲೀಸ್‌ ಮೂಲಗಳು ತಿಳಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!