ಮೈಸೂರು: ಸುತ್ತಲೂ ಜನಮಂದಿ ತುಂಬಿರುವ ಸಮಯದಲ್ಲೇ ಗುರುವಾರ ರಾತ್ರಿ ತಲವಾರಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ನಗರದ ರಾಮಾನುಜ ರಸ್ತೆಯ 12ನೇ ಕ್ರಾಸ್ನಲ್ಲಿ ನಡೆದಿದೆ. ಕುಮುದಾ, ವಿಶಾಲಾಕ್ಷಿ, ರೇಣುಕಮ್ಮ, ರಾಜಣ್ಣ ಹಲ್ಲೆಗೊಳಪಟ್ಟವರು. ರಾತ್ರಿ 9.20ರ ವೇಳೆಗೆ ಆಟೋದಲ್ಲಿ ಹೋಗುತ್ತಿದ್ದವರನ್ನು ಕಪ್ಪು ಬಣ್ಣದ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಡ್ಡಹಾಕಿದ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ಮನಸೋ ಇಚ್ಛೆಯಂತೆ ಹಲ್ಲೆ ಮಾಡಿದ್ದಾರೆ.
ಸಾಂಸ್ಕೃತಿಕ ನಗರಿ ಎನಿಸಿಕೊಂಡಿರುವ ಮೈಸೂರಿನಲ್ಲಿ ನಡು ರಸ್ತೆಯಲ್ಲೇ ಚಲಿಸುತ್ತಿದ್ದ ಆಟೋವನ್ನು ಅಡ್ಡಹಾಕಿದ ದುಷ್ಕರ್ಮಿಗಳ ಗುಂಪೊಂದು ಮಚ್ಚಿನಿಂದ ದಾಳಿ ನಡೆಸಿದೆ. ಸಾರ್ವಜನಿಕರ ಎದುರಲ್ಲೇ ಆಟೋದೊಳಗಿದ್ದ ಮೂವರು ಮಹಿಳೆಯರು ಹಾಗೂ ಒಬ್ಬ ಯುವಕನ ಮೇಲೆ ಮನಬಂದಂತೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಒಬ್ಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪೋಕ್ಸೋ ಕೇಸೊಂದರ ರಾಜಿ ಸಂಧಾನ ವಿಫಲವಾದ ಕಾರಣ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದ್ದು, ಸಂತ್ರಸ್ತೆ ಕುಟುಂಬಸ್ಥರು ಆರೋಪಿಯ ಕುಟುಂಬದ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t