ನಟಿ ಶ್ರುತಿಗೆ ಚೂರಿ ಇರಿತ: ಅಂಬರೀಶ್‌ ಅರೆಸ್ಟ್

ಬೆಂಗಳೂರು: ಕಿರುತೆರೆ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿ ಮಂಜುಳ @ಶ್ರುತಿಗೆ ಪತಿಯೇ ಚಾಕು ಇರಿದ ಘಟನೆ ಹನುಮಂತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್‌ನಲ್ಲಿ ಜುಲೈ 4 ರಂದು ನಡೆದಿದ್ದು ತಡವಾಗಿ ಘಟನೆ ಬೆಳಕಿಗೆ ಬಂದಿದೆ.

Serial actress Shruti 3

ಚೂರಿ ಇರಿದ ಗಂಡ ಅಂಬರೀಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಶ್ರುತಿ ನಟಿಸಿದ್ದಾರೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶ್ರುತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ಹಿನ್ನೆಲೆ:
20 ವರ್ಷದ ಹಿಂದೆ ಅಂಬರೀಶ್ ನನ್ನು ಪ್ರೀತಿಸಿ ಶ್ರುತಿ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಹನುಮಂತ ನಗರದಲ್ಲಿ ಲೀಸ್‌ಗೆ ಮನೆ ಪಡೆದು ದಂಪತಿ ವಾಸವಾಗಿದ್ದರು. ಕೆಲ ತಿಂಗಳಿನಿಂದ ಶ್ರುತಿ ನಡವಳಿಕೆ ಗಂಡ ಅಂಬರೀಶ್‌ಗೆ ಇಷ್ಟವಾಗುತ್ತಿರಲಿಲ್ಲ. ಶೀಲ ಶಂಕಿಸಿ ಜಗಳ ಮಾಡುತ್ತಿದ್ದ.

ಇಬ್ಬರ ಮಧ್ಯೆ ಲೀಸ್‌ ಹಣಕ್ಕೆ ಸಂಬಂಧಿಸಿದಂತೆ ಆಗಾಗ ಜಗಳ ನಡೆಯುತ್ತಿತ್ತು. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಹಿಂದೆ ಶ್ರುತಿ ದೂರು ನೀಡಿದ್ದರು. ಇಬ್ಬರ ನಡುವೆ ಹೊಂದಾಣಿಕೆ ಸರಿ ಇಲ್ಲದ ಕಾರಣ ಕಳೆದ ಏಪ್ರಿಲ್‌ನಲ್ಲಿ ಪತಿಯಿಂದ ದೂರವಾಗಿ ಅಣ್ಣನ ಮನೆಯಲ್ಲಿ ಶ್ರುತಿ ನೆಲೆಸಿದ್ದರು.

Serial actress Shruti 2

ಜುಲೈ 3 ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಪತಿ, ಪತ್ನಿ ರಾಜಿಯಾಗಿ ಒಂದಾಗಿದ್ದರು. ಆದರೆ ಜುಲೈ 4 ರಂದು ಮಕ್ಕಳು ಕಾಲೇಜಿಗೆ ಹೋಗಿದ್ದಾಗ ಪೆಪ್ಪರ್ ಸ್ಪ್ರೇ ಮಾಡಿ ಪತ್ನಿಯ ಕೊಲೆಗೆ ಅಂಬರೀಶ್‌ ಯತ್ನಿಸಿದ್ದಾನೆ. ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ತಲೆ ಕೂದಲು ಹಿಡಿದು ಗೋಡೆ ತಲೆ ಗುದ್ದಿಸಿ ಕೊಲೆಗೆ ಅಂಬರೀಶ್‌ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

Serial actress Shruti 1

ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರುವುದಾಗಿ ಶ್ರುತಿ ದೂರು ನೀಡಿದ್ದು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆಯತ್ನ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ ಅಂಬರೀಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!