ಸಾಲದ ವಿಚಾರಕ್ಕೆ ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

 ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದ ದಂಪತಿಯ ನಡುವೆ ಸಾಲದ ವಿಚಾರಕ್ಕೆ ಜಗಳ ನಡೆದು ಪತಿರಾಯ ಪತ್ನಿಯ ಮೂಗನ್ನೇ ಹಲ್ಲಿನಿಂದ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ.ಪತ್ನಿ ವಿದ್ಯಾ (30) ರ ಮೂಗಿನ ಮುಂಭಾಗ ಸಂಪೂರ್ಣ ತುಂಡಾಗಿದೆ. ವಿದ್ಯಾ ಅವರ ಪತಿ ವಿಜಯ್ ಈ ಕೃತ್ಯ ನಡೆಸಿದ್ದಾನೆ.


ಸಾಲದ ಕಂತು ಕಟ್ಟುವ ವಿಚಾರಕ್ಕೆ ದಂಪತಿಯ ನಡುವೆ ಜು.8 ರ ಮಧ್ಯಾಹ್ನ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ಹೋಗಿ ವಿಜಯ್ ಪತ್ನಿ ವಿದ್ಯಾಗೆ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಗಲಾಟೆ ವೇಳೆ ಕೆಳಗೆ ಬಿದ್ದ ಪತ್ನಿ ವಿದ್ಯಾಳ ಮೂಗು ಕಚ್ಚಿ ತುಂಡರಿಸಿದ್ದಾನೆ. ಸ್ಥಳೀಯರು ತಕ್ಷಣವೇ ಗಲಾಟೆ ಬಿಡಿಸಿ, ಆಸ್ಪತ್ರೆಗೆ ಕಳುಹಿಸಿದ್ದಾರೆ.

ಗಾಯಗೊಂಡಿದ್ದ ವಿದ್ಯಾಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಲ್ಲೆ ಸಂಬಂಧ ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಮೆಡಿಕಲ್ ಲೀಗಲ್ ಕೇಸ್‌ ನಮೂದು ಮಾಡಲಾಗಿದ್ದು, ಬಳಿಕ ಜಯನಗರ ಠಾಣೆಯಿಂದ ದೂರು ದಾವಣಗೆರೆಯ ಚನ್ನಗಿರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!