ಪಾಕಿಸ್ತಾನದಲ್ಲಿ ಬಸ್ ಪ್ರಯಾಣಿಕರನ್ನು ಅಪಹರಿಸಿದ ಶಸ್ತ್ರಸಜ್ಜಿತ ದಂಗೆಕೋರರು ; 9 ಜನರ ದಾರುಣ ಹತ್ಯೆ

ಬಲೂಚಿಸ್ತಾನ: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಭಯೋತ್ಪಾದಕರು ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ದಾರುಣವಾಗಿ ಹತ್ಯೆಗೈದಿರುವ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಅವರಲ್ಲಿ 9 ಮಂದಿಯನ್ನು ಲಾಹೋರ್‌ಗೆ ಚಲಿಸುತ್ತಿದ್ದ ಬಸ್‌ನಿಂದ ಇಳಿಸಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅವರೆಲ್ಲರೂ ಪಂಜಾಬ್ ಪ್ರಾಂತ್ಯದ ವಿವಿಧ ಭಾಗಗಳಿಗೆ ಸೇರಿದವರಾಗಿದ್ದಾರೆ ಹಾಗೂ ಮರಣೋತ್ತರ ಪರೀಕ್ಷೆ ಮತ್ತು ಅಂತ್ಯಕ್ರಿಯೆಗಾಗಿ ನಾವು ಒಂಬತ್ತು ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಸಹಾಯಕ ಆಯುಕ್ತ ಝೋಬ್ ನವೀದ್ ಆಲಂ ಮಾಹಿತಿ ನೀಡಿದ್ದಾರೆ.

ದಂಗೆಕೋರರು ರಾತ್ರಿಯ ಸಮಯದಲ್ಲಿ ಪ್ರಾಂತ್ಯದ ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಚೆಕ್ ಪೋಸ್ಟ್‌ಗಳು, ಸರ್ಕಾರಿ ಸ್ಥಾಪನೆಗಳು, ಪೊಲೀಸ್ ಠಾಣೆಗಳು, ಬ್ಯಾಂಕುಗಳು ಮತ್ತು ಟವ್ ಮೇಲೆ ದಾಳಿ ನಡೆಸಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!