ಬೆಂಗಳೂರು: ಬೆಂಗಳೂರಿನ ಕಾಡುಗೋಡಿ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ತಾಯಿ-ಮಗಳು ಸ್ನಾನಕ್ಕೆ ತೆರಳಿದ್ದಾಗ ವಿಕೃತ ಕಾಮುಕ(ಹಾಜ ಮೊಯಿನುದ್ದಿನ್)ನೊಬ್ಬ ವೀಡಿಯೋ ಮಾಡೋದಕ್ಕೆ ಹೋಗಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ.
ಈತ ಚನ್ನಸಂದ್ರ ಮೂಲದವನಾಗಿದ್ದು ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡಿದ್ದ. ಮಹಿಳೆಯರು ಸ್ನಾನ ಮಾಡೋದನ್ನ ವೀಡಿಯೋ ಮಾಡೋದನ್ನೇ ಕಾಯಕ ಮಾಡಿಕೊಂಡಿದ್ದ ಮೊಯಿನುದ್ದಿನ್, ಕಳೆದ ಮಂಗಳವಾರ ಬೆಳಗ್ಗೆ 6:30ರ ಸುಮಾರಿಗೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ತಾಯಿ-ಮಗಳು ಬಾತ್‌ರೂಮ್‌ಗೆ ಸ್ನಾನಕ್ಕೆ ತೆರಳಿರುವುದನ್ನು ಗಮನಿಸಿದ ಈ ಕಾಮುಕ ನಟಕಿ ಮೂಲಕ ಕದ್ದು ಮುಚ್ಚಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾನೆ.
ಈ ವೇಳೆ ಮಗಳು ವಿಡಿಯೋ ಮಾಡೋದನ್ನ ಗಮನಿಸಿದ್ದಾಳೆ. ಬಳಿಕ ಹೊರಗೆ ಬಂದು ತಂದೆಗೆ ಹೇಳಿದ್ದಾಳೆ. ಬಾಲಕಿ ತಂದೆ ಹೋಗಿ ನೋಡುವಷ್ಟರಲ್ಲಿ ಕಾಮುಕ ಅಲ್ಲಿಂದ ತಪ್ಪಿಸಿಕೊಂಡಿದ್ದ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕನನ್ನ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ ವಿಡಿಯೋವನ್ನೂ ಡಿಲೀಟ್ ಮಾಡಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t