‘ಟೈಗರ್ ಮೆರಾಜ್ ಇಡಿಸಿ’ಎಂಬ ಇನ್ಸ್ಟಾಗ್ರಾಂ ಖಾತೆಯಿಂದ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ಅವರಿಗೆ ‘ಟೈಗರ್ ಮೆರಾಜ್ ಇಡಿಸಿ’ ಎಂಬ ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ.

ಜೀವ ಬೆದರಿಕೆ ಹಿನ್ನೆಲೆ ರಾಜೇಶ್ ಭಟ್ ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿರುವ ಕಾರಣ ಈ ಬೆದರಿಕೆ ಹಾಕಲಾಗಿದೆ. ಈ ಕೃತ್ಯ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.ವಿಚಾರದ ತೀವ್ರತೆಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು, ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ ಎಂದು ರಾಜೇಶ್ ಭಟ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸೈಬರ್ ಡಿಸಿಪಿ ನಿತೀಶ್ ಚಂದ್ರ ಧರಿಯಾ, ಜುಲೈ 11ರ ರಾತ್ರಿ 9 ಗಂಟೆ ಸುಮಾರಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಪಾಟ್ನಾ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!