ಸುರತ್ಕಲ್: ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ಎಚ್ 2ಎಸ್ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಲೀಕ್ ಆಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಎಂಆರ್ ಪಿಎಲ್ ನ ಒಯಮಿಂಡೀಸ್ ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಕೇರಳ ಮೂಲದ ಓರ್ವ ಮತ್ತು ಉತ್ತರ ಪ್ರದೇಶ ಮೂಲದ ವ್ಯಕ್ತಿಯೋರ್ವ ಸೇರಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮತ್ತೋರ್ವ ಯುಪಿ ಮೂಲದ ಕಾರ್ಮಿಕ ಗಂಭೀರ ಸ್ಥಿತಿಯಲ್ಲಿದ್ದು ಆತನನ್ನು ನಗರದ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೂರೂ ಕಾರ್ಮಿಕರು ಎಂಆರ್ ಪಿಎಲ್ ಒಯಮಿಂಡೀಸ್ ಘಟಕದ ಶೇಖರಣಾ ಪ್ರದೇಶದ ಮೇಂಟೆನೆನ್ಸ್ ಕಾರ್ಮಿಕಾರಗಿದ್ದರು ಎಂದು ಹೇಳಲಾಗಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t