ಬೆಂಗಳೂರು: ನಗರದ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಶುಕ್ರವಾರ ಸಂಜೆ 6:10ರ ವೇಳೆಗೆ ಗಾಳಿ ಸಹಿತ ಮಳೆಯಿಂದಾಗಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರವೊಂದು ಬಿದ್ದಿದ್ದು, ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಆದರೆ ಕಾರು ಚಾಲಕ ಜೀವಾಪಾಯದಿಂದ ಪಾರಾಗಿದ್ದಾರೆ.
ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನ ಈವರೆಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ತೆರವು ಮಾಡಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವೆಡೆ ತಡರಾತ್ರಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ ಎಂದು ತಿಳಿದುಬಂದಿದೆ. ಅಲ್ಲದೇ ಎಂಜಿ ರೋಡ್ ಬಳಿಯ ಶಾಂತಲಾ ರಸ್ತೆಯಲ್ಲಿ ಮುಖ್ಯರಸ್ತೆಯಲ್ಲೂ ಬೃಹತ್ ಗಾತ್ರದ ಮರ ಬಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t