ಸುಳ್ಯ: ತೀವ್ರ ಜ್ವರದ ಹಿನ್ನೆಲೆ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಶಾಲಾ ಬಾಲಕಿಗೆ ಡಾಕ್ಟರ್ (ಯುಪಿಟಿ ಪಾಸಿಟಿವ್)ಗರ್ಭಿಣಿ ಎಂದು ವರದಿ ನೀಡಿದ ಆರೋಪ ವ್ಯಕ್ತವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ವಿರುದ್ಧ ದೂರು ನೀಡಲಾಗಿದೆ.
ಜ್ವರದಿಂದ ಬಳಲುತ್ತಿದ್ದ 13 ವರ್ಷದ ಬಾಲಕಿಯನ್ನು ಹೆತ್ತವರು ಚಿಕಿತ್ಸೆಗಾಗಿ ಜು. 1ರಂದು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು, ಅಲ್ಲಿನ ವೈದ್ಯಾಧಿಕಾರಿ ಬಾಲಕಿಯನ್ನು ತಪಾಸಣೆ ಮಾಡಿದ ನಂತರ ಹೊರ ರೋಗಿಗಳ ದಾಖಲಾತಿಯಲ್ಲಿ ಗರ್ಭಿಣಿ ಎಂದು ಬರೆದಿದ್ದು, ಇನ್ನಷ್ಟು ತಪಾಸಣೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದರು. ಈ ವರದಿಯಿಂದ ಗಾಬರಿಗೊಂಡ ಹೆತ್ತವರು ಬಾಲಕಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಮಗಳು ಗರ್ಭಿಣಿಯಾಗಿಲ್ಲ ಎಂಬ ವರದಿ ಲಭಿಸಿದೆ.
ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗಲೂ ಗರ್ಭಧಾರಣೆಯ ಕುರಿತು ಯಾವುದೇ ದೃಢೀಕರಣ ನೀಡಿರಲಿಲ್ಲ. ಬಾಲಕಿ ಗರ್ಭಿಣಿ ಎಂಬ ವಿಚಾರವನ್ನು ವೈದ್ಯಾಧಿಕಾರಿಯು ಎಲ್ಲರಿಗೂ ಹೇಳಿದ್ದಾರೆ ಎಂಬ ಆರೋಪ ವ್ಯಕ್ತವಾಗಿದ್ದು, ಈ ಕುರಿತು ವೈದ್ಯಾಧಿಕಾರಿಯ ಮೇಲೆ ಆರೋಗ್ಯಾಧಿಕಾರಿಗಳಿಗೆ ಬಾಲಕಿಯ ಹೆತ್ತವರು ದಾಖಲೆಯೊಂದಿಗೆ ದೂರು ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಡಿಎಚ್‌ಒ ಡಾ.ಎಚ್.ಆರ್.ತಿಮ್ಮಯ್ಯ ಅವರು ತನಿಖೆಗಾಗಿ ತಂಡವನ್ನು ರಚಿಸಿ ಕಳುಹಿಸಿದ್ದಾರೆ.ತನಿಖಾ ತಂಡ ಸ್ಥಳಕ್ಕೆ ಭೇಟಿ ನೀಡಿದೆ. ತನಿಖೆ ಅನಂತರ ತಪ್ಪು ಕಂಡುಬಂದಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಚ್‌ಒ ಡಾ. ತಿಮ್ಮಯ್ಯ ತಿಳಿಸಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t