ಕುಂದಾಪುರ: ಉತ್ತರ ಪ್ರದೇಶದ ಮಹಿಳೆಯೊಬ್ಬರು ಕೋಟೇಶ್ವರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದು, ಅಲ್ಲಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ ಮೂಲದ ಮಹಾದೇವ (32) ಅವರ ಪತ್ನಿ ಅಂಜಲಿ (28) ನಾಪತ್ತೆಯಾದ ಮಹಿಳೆ.
25 ದಿನಗಳ ಹಿಂದಷ್ಟೇ ಮಹಾದೇವ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬಂದು ಕೋಟೇಶ್ವರದ ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಜು. 7ರಂದು ಬೆಳಗ್ಗೆ ಕೆಲಸಕ್ಕೆ ಹೋದಾಗ ಪತ್ನಿ ಅಂಜಲಿ ಅವರು 8 ವರ್ಷದ ಪುತ್ರಿ ಹಾಗೂ 4 ವರ್ಷದ ಪುತ್ರಿಯೊಂದಿಗೆ ಮನೆಯಲ್ಲಿಯೇ ಇದ್ದರು. ಆದರೆ ಮಹಾದೇವ ಅವರು ಫ್ಯಾಕ್ಟರಿಯಿಂದ ವಾಪಸ್ ಬಂದಾಗ ಪತ್ನಿ ಮನೆಯಲ್ಲಿ ಇರಲಿಲ್ಲ. ಇಬ್ಬರು ಮಕ್ಕಳು ಮಾತ್ರ ಇದ್ದರು.
ಬಳಿಕ ಎಲ್ಲ ಕಡೆ ಹುಡುಕಾಟ ನಡೆಸಿದ್ದು, ಊರಿಗೆ ಹಾಗೂ ಪತ್ನಿಯ ಮನೆಗೂ ಕರೆ ಮಾಡಿ ವಿಚಾರಿಸಿದರೂ, ಈವರೆಗೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t