ಹಾಸ್ಟೆಲ್ ನಲ್ಲಿ ಡ್ರಗ್ಸ್ ನೀಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದ ಆರೋಪಿಯ ಬಂಧನ

ಕೋಲ್ಕತ್ತಾ: ಇಂಡಿಯನ್ ಇನ್‌ ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ ಮೆಂಟ್-ಕಲ್ಕತ್ತಾ ವಿದ್ಯಾರ್ಥಿನಿಯೊಬ್ಬಳಿಗೆ ಬಾಯ್ಸ್ ವಸತಿಗೃಹದಲ್ಲಿ ಮಾದಕ ದ್ರವ್ಯ ನೀಡಿ ಅತ್ಯಾಚಾರ ನಡೆಸಿರುವ ಘಟನೆ ವರದಿಯಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹರಿದೇವ್‌ ಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿಗೆ ಅನುಸಾರವಾಗಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

ಕೌನ್ಸೆಲಿಂಗ್ ಸೆಷನ್‌ ಗಾಗಿ ವಿದ್ಯಾರ್ಥಿನಿಯನ್ನು ಹಾಸ್ಟೆಲ್ ಗೆ ಕರೆದಿದ್ದ ಆರೋಪಿ ಬಳಿಕ ಡ್ರಗ್ಸ್ ಬೆರೆಸಿದ ಪಾನೀಯ ನೀಡಿದ್ದು, ಪಾನೀಯ ಸೇವಿಸಿದ ಬಳಿಕ ವಿದ್ಯಾರ್ಥಿನಿ ಪ್ರಜ್ಞಾಹೀನಳಾಗಿದ್ದಾಳೆ. ಪ್ರಜ್ಞೆ ಬಂದ ವೇಳೆ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬುದು ಆಕೆಗೆ ಅರಿವಾಗಿದೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾರೆ.

ಕೃತ್ಯದ ಬಗ್ಗೆ ಯಾರಿಗಾದರೂ ವಿಷಯ ತಿಳಿಸಿದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಳಿಕ ಬೆದರಿಕೆ ಹಾಕಿದ್ದ ಎಂದು ಹೇಳಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹರಿದೇವ್‌ ಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ಆರೋಪಿಯ ವಿರುದ್ಧ ನೀಡಿದ ದೂರನ್ನು ದಾಖಲಿಸಿಕೊಂಡಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!