ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಪಡೆದ ರಿತುಪರ್ಣಗೆ ಶಾಸಕ ಡಾ.ಭರತ್ ಶೆಟ್ಟಿ ಅಭಿನಂದನೆ!

ಮಂಗಳೂರು: ವಿಶ್ವದ ಪ್ರತಿಷ್ಠಿತ ಕಾರು ಸಂಸ್ಥೆ ರೋಲ್ಸ್ ರಾಯ್ಸ್‌ನಲ್ಲಿ (Rolls Royce) ಕನ್ನಡತಿಯೋರ್ವಳು ಕೆಲಸ ಗಿಟ್ಟಿಸಿಕೊಂಡಿದ್ದಾಳೆ. ಈ ಮೂಲಕ ರೋಲ್ಸ್ ರಾಯ್ಸ್‌ನಲ್ಲಿ ಕೆಲಸ ಪಡೆದ ಕರ್ನಾಟಕದ (Karntaka) ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ.

ತೀರ್ಥಹಳ್ಳಿ ಮೂಲದ ಮಂಗಳೂರು (Mangaluru) ನಿವಾಸಿಯಾಗಿರುವ ರಿತುಪರ್ಣಗೆ ಬಾಲ್ಯದಲ್ಲಿ ವೈದ್ಯೆ ಆಗಬೇಕು ಎಂದು ಕನಸು ಇತ್ತು. ಆದರೆ ಕಾರಣಾಂತರಗಳಿಂದ ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ರೊಬೋಟಿಕ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಶನಿವಾರ ರಿತು ಪರ್ಣ ಅವರ ಮನೆಗೆ ಭೇಟಿ ನೀಡಿದ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ಸನ್ಮಾನಿಸಿ ಅಭಿನಂದಿಸಿದರು. ಶಿಕ್ಷಣವನ್ನು ಕಠಿಣ ಪರಿಶ್ರಮದಿಂದ ಪಡೆದಾಗ ಗುರಿಯಡೆಗೆ ಮುನ್ನಡೆಯಲು ಸಾಧ್ಯವಾಗುತ್ತದೆ. ಇದಕ್ಕೆ ಮಾದರಿಯಾಗಿ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು ಎನ್ನುವ ಛಲದೊಂದಿಗೆ
ರೀತು ಪರ್ಣ ಅವರು ಮುನ್ನಡೆದು ಯಶಸ್ವಿಯಾಗಿದ್ದಾರೆ. ಶಿಕ್ಷಣವನ್ನು ಮುಗಿಸಿ ಕಾಲೇಜುಗಳಿಂದ ಹೊರ ಬರುತ್ತಿರುವ ಯುವಕರಿಗೆ ಯುವತಿಯರಿಗೆ ಇವರ ಈ ಯಶಸ್ಸು ಉದ್ಯೋಗ ಕ್ಷೇತ್ರದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ. ಇವರು ಕಲಿತ ಇಂಜಿನಿಯರಿಂಗ್ ಕಾಲೇಜು, ಪೋಷಕರಿಗೆ ಹೆಮ್ಮೆಯನ್ನ ತಂದಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ಜಯಾನಂದ ಅಂಚನ್, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

error: Content is protected !!