ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆರೋಪಿ ಸೆರೆ

ಮೂಲ್ಕಿ: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಿನ್ನಿಗೋಳಿಯ ನಿವಾಸಿ, ಉದ್ಯಮಿ ರಾಕೀ ಪಿಂಟೋ(68) ಪ್ರಕರಣದ ಆರೋಪಿ.


ಬಾಲಕಿಯ ತಾಯಿ ಈ ಬಗ್ಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ತಾಯಿ ದೂರು ನೀಡಿದ್ದರು. ಆರೋಪಿಯ ಕಾರನ್ನು ವಶಪಡಿಸಲಾಗಿದೆ. ಕಳೆದ ವಾರ ಇದೇ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಇಬ್ಬರು ಅಪ್ರಾಪ್ತರು ಐದು ಮಂದಿಯನ್ನು ಬಂಧಿಸಲಾಗಿತ್ತು. ಮೂಲ್ಕಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!