ಫೇಸ್‌ಬುಕ್‌ ಖಾತೆಯಲ್ಲಿ ಅವಹೇಳನಕಾರಿ ಬರಹ : ಇಬ್ಬರ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಜು. 11ರಂದು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದಿರುವ ಕುರಿತು ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ. ಅವರು ಪ್ರವೀಣ್‌ ಲೊಬೋ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆ ದೂರು ನೀಡಿದ್ದಾರೆ.

ಇವರು ತನ್ನ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ ಪ್ರವೀಣ್‌ ಲೊಬೋ ಎಂಬ ಖಾತೆಯಲ್ಲಿ ಸೌಜನ್ಯಾ ಪರ ಹೋರಾಟಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಾಣಿಸಿತು.

ಹಾಗೆಯೇ ಧರ್ಮಸ್ಥಳ ಗ್ರಾಮದ ನಿವಾಸಿ ಚೇತನ್‌ ಎನ್‌. (28) ಅವರು ತನ್ನ ಫೇಸ್‌ಬುಕ್‌ ಖಾತೆಯನ್ನು ಪರಿಶೀಲಿಸುತ್ತಿದ್ದಾಗ ಡಾಕ್ಟರ್‌ ವರ್ಮಾ ಎಂಬ ಖಾತೆಯಲ್ಲಿ ಧರ್ಮಸ್ಥಳದ ಧಾರ್ಮಿಕ ಶ್ರದ್ಧಾ ಕೇಂದ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳ ಬಗ್ಗೆ ಅಶ್ಲೀಲ ಸಂದೇಶ ಹಾಗೂ ಭಾವಚಿತ್ರ ಪೋಸ್ಟ್ ಮಾಡಿರುವುದು ಪತ್ತೆಯಾಗಿದೆ. ಚೇತನ್‌ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡೂ ಪ್ರಕರಣಗಳ ಕುರಿತು ಪೋಲೀಸರು ದೂರನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ ಎಂದಿದ್ದಾರೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!