ಅಭಿನಯ ಸರಸ್ವತಿ ಬಿ.ಸರೋಜಾದೇವಿ ಇನ್ನಿಲ್ಲ: ಸ್ಯಾಂಡಲ್‌ವುಡ್‌ ಕಣ್ಣೀರು

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಇವರ ನಿಧನಕ್ಕೆ ಇಡೀ ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ ಭಾರತದ ಚಿತ್ರದ ಹಲವು ನಟ ನಟಿಯರು ಕಣ್ಣೀರು ಹಾಕಿದ್ದಾರೆ.

She performed puja and turned on the TV B Saroja Devis last moment

ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.

ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

 

error: Content is protected !!