ಉಡುಪಿ: ಇತ್ತೀಚಿಗಷ್ಟೇ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾಗಿತ್ತು. ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ದುರ್ಗಾ ಗ್ರಾಮ ಪಂಚಾಯತ್ ವ್ಯಪ್ತಿಯ ನಿರ್ಜನ ಪ್ರದೇಶದಲ್ಲಿ ಹಸುವಿನ ತಲೆ ಬರುಡೆ ಮತ್ತು ಇತರ ಭಾಗಗಳು ಪತ್ತೆಯಾಗಿವೆ.
ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು. ಕಾರ್ಕಳ ಪೊಲೀಸರು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.