ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಮೂಡಬಿದ್ರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್

ಮಂಗಳೂರು: ಬೆಂಗಳೂರಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂಡಬಿದ್ರೆಯ ಪ್ರತಿಷ್ಠಿತ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಮತ್ತು ಓರ್ವ ಸ್ನೇಹಿತನೊಬ್ಬನನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ. ಅವಳು  ಪಿಯುಸಿ ಕಲಿತಿದ್ದು, ಅಲ್ಲಿಂದ ಬೆಂಗಳೂರಿನಲ್ಲಿ ಶಿಕ್ಷಣ ಮುಂದುವರಿಸುತ್ತಿದ್ದಳು. ವಿದ್ಯಾರ್ಥಿನಿ ಮೂಡಬಿದ್ರೆಯಲ್ಲಿ ಇದ್ದಾಗಲೇ ಓರ್ವ ಉಪನ್ಯಾಸಕ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡು, ಅದನ್ನು ದುರ್ಬಳಕೆ ಮಾಡಿ ಬೆಂಗಳೂರಿನಲ್ಲಿ ಅತ್ಯಾಚಾರ ಎಸಗಿದ್ದ. ಅಲ್ಲದೆ ಇದರ ವಿಡಿಯೋ ಇದೆ ಎಂದು ಬೆದರಿಸಿ ಮತ್ತೊಬ್ಬ ಊಪನ್ಯಾಸಕನೂ ಆಕೆಯ ಅತ್ಯಾಚಾರ ಎಸಗಿದ್ದಲ್ಲದೆ, ಇವರಿಗೆ ರೂಂ ನೀಡಿದ್ದ ಆರೋಪಿ ಸಿಸಿಟಿವಿ ದೃಶ್ಯಾವಳಿ ಇದೆ ಎಂದು ಬೆದರಿಸಿ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ಬೆಂಗಳೂರಿನಲ್ಲಿ ಮೂವರ ಬಂಧನ

ಫಿಸಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜೊತೆ ಹತ್ತಿರವಾಗಿ ಚಾಟಿಂಗ್ ಆರಂಭಿಸಿದ್ದ, ನಂತರ ಆಕೆಗೆ ನೋಟ್ಸ್ ನೀಡಿ ನೆರವಾಗಿ ಸಲುಗೆ ಬೆಳೆಸಿಕೊಂಡಿದ್ದ. ವಿದ್ಯಾರ್ಥಿನಿಯನ್ನು ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಬಯಾಲಜಿ ಉಪನ್ಯಾಸಕ ಸಂದೀಪ್ ಕೂಡಾ ವಿದ್ಯಾರ್ಥಿನಿಯ ಮೇಲೆ ಕಣ್ಣು ಹಾಕಿದ್ದ. ಆದರೆ ಆಕೆ ಅದಕ್ಕೆ ವಿರೋಧ ವ್ಯಕ್ತಪಡಿಸಿದಾಗ ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವೀಡಿಯೊ ತನ್ನ ಬಳಿ ಇದೆ. ಸಹಕರಿಸದಿದ್ದರೆ ಬಹಿರಂಗಪಡಿಸುವುದಾಗಿ ಹೆದರಿಸಿ ಅತ್ಯಾಚಾರ ನಡೆಸಿದ್ದಾನೆ. ಸಂದೀಪ್‌ಗೆ ರೂಂ ನೀಡಿದ್ದ ಅನೂಪ್‌ ಎಂಬಾತ ವಿದ್ಯಾರ್ಥಿನಿಯನ್ನು ಸಂಪರ್ಕಿಸಿ, ನೀನು ನನ್ನ ರೂಮಿಗೆ ಬಂದಿರುವುದು ಇಲ್ಲಿ ಅಳವಡಿಸಿ ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆದರಿಸಿ ಆತನೂ ಅತ್ಯಾಚಾರ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ಉಪನ್ಯಾಸಕರ ಉಪದ್ರ ಹೆಚ್ಚಾದಾಗ ಕೃತ್ಯದ ಬಗ್ಗೆ ಪೋಷಕರಲ್ಲಿ ಹೇಳಿದ್ದಳು. ಪೋಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಕೌನ್ಸೆಲಿಂಗ್‌ ಮಾಡಿದಾಗ ವಿಷಯ ಬಹಿರಂಗವಾಗಿದ್ದು, ಪೊಲೀಸರಿಗೆ ದೂರು ಕೊಡಿಸಿದ್ದರು. ಇದರ ಆಧಾರದಲ್ಲಿ ಮಾರತಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

 

error: Content is protected !!