ರಾಜ್ಯದಲ್ಲಿ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ನು ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. 2025-26ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು.ಈ ಕುರಿತು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಇನ್ಮುಂದೆ ಪ್ರೇಕ್ಷಕರಿಗೆ ಟಿಕೆಟ್ ದರ ಕಡಿಮೆ ಆಗಲಿದೆ ಎಂದು ಸಿಹಿ ಸುದ್ದಿ ಕೊಟ್ಟಿದ್ದೆ.

ಇದು ಎಲ್ಲಾ ಭಾಷೆಯ ಸಿನಿಮಾಗಳಿಗೂ ಅನ್ವಯವಾಗಲಿದೆ. ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದ್ದು, ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದ್ದು, ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಕೋಟಿಗಟ್ಟಲೆ ಹಣವನ್ನು ಸಂಪಾದಿಸುತ್ತಿದೆ. ಪರಭಾಷೆ ಸಿನಿಮಾಗಳ ಟಿಕೆಟ್​ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.

ಏಕಪರದೆ ಚಿತ್ರಮಂದಿರಗಳಿಗೆ ಹೋಲಿಸಿದರೆ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳ ಟಿಕೆಟ್ ಬೆಲೆ ದುಬಾರಿ ಆಗಿರುತ್ತದೆ. ಆ ಕಾರಣದಿಂದಲೇ ಜನರು ಚಿತ್ರಮಂದಿರಗಳಿಂದ ದೂರ ಉಳಿದುಕೊಂಡಿದ್ದಾರೆ ಎಂಬುದು ಅನೇಕರ ಅಭಿಪ್ರಾಯ ಆಗಿತ್ತು. ಹಾಗಾಗಿ ಸಿನಿಮಾಗಳ ಟಿಕೆಟ್ ಬೆಲೆ ತಗ್ಗಿಸಬೇಕು ಎಂಬ ಜನರ ಆಕಾಂಕ್ಷೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!