ಮಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯ ಗಂಡ ಹಾಗೂ ಕಾವೂರ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್‌ನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತಂತೆ ಮಹಿಳೆ ಜು.15ರಂದು ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.
ದೂರಿನಲ್ಲಿ ಏನಿದೆ?
ಮಹಿಳೆಯ ಗಂಡ ಆಕೆಯನ್ನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ ಅದವರ ವಿಡಿಯೋವನ್ನು ಚಿತ್ರೀಕರಣ ಮಾಡಿದ್ದ. ಆ ವಿಡಿಯೋವನ್ನು ಮುಂದಿಟ್ಟುಕೊಂಡು ಗಂಡ, ನೀನು ಇತರರೊಂದಿಗೂ ದೈಹಿಕ ಸಂಪರ್ಕ ನಡೆಸಬೇಕು, ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿದ್ದಾನೆ. ಸಂತ್ರಸ್ತ ಮಹಿಳೆಯು ಕೃತ್ಯದ ಬಗ್ಗೆ ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್‌ಗೆ ಈ ಬಗ್ಗೆ ತಿಳಿಸಿದ್ದರು. ಚಂದ್ರನಾಯ್ಕ್ ಸಂತ್ರಸ್ತೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಫೋಟೋ ಮತ್ತು ವೀಡಿಯೋವನ್ನು ಅಳಿಸಿದ್ದಾನೆ.
ಆದರೆ ಆತನೂ ಸಂತ್ರಸ್ತೆಯ ಗಂಡನ ದುಷ್ಪ್ರೇರಣೆಯಂತೆ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆದ್ದಾದ್ದಾಗಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪೊಲೀಸರು ಸಂತ್ರಸ್ತ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕನನ್ನು ದಸ್ತಗಿರಿ ಮಾಡಿದ್ದು, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.