ಮಂಗಳೂರು: ಮಂಗಳೂರು ನಗರದಲ್ಲಿ ಧಾರಾಕಾರವಾಗಿ ಸುರಿದ ಮಳೆಯ ಪರಿಣಾಮವಾಗಿ ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ವಾಹನ ಪ್ರಯಾಣಿಕರಿಗೆ ತೊಂದರೆಯನ್ನುಂಟು ಮಾಡಿದೆ.
ಬುಧವಾರ ತಡರಾತ್ರಿ ಮಂಗಳೂರಿನ ಹಲವೆಡೆ ಭಾರೀ ಮಳೆಯಿಂದ ಹಾನಿ ಸಂಭವಿಸಿದ ಘಟನೆ ನಡೆದಿದ್ದು, ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ನಿನ್ನೆ ರಾತ್ರಿ ಸುರಿದ ಮಳೆಗೆ ಬಿಜೈ ಬಟ್ಟಗುಡ್ಡ, ಆರ್ಯಸಮಾಜ ರಸ್ತೆ, ಪಂಪ್ವೆಲ್ , ಮಾಲೆಮಾರ್, ಕಾವೂರು ಉಲ್ಲಾಸ ನಗರ, ಕೊಟ್ಟಾರ ಚೌಕಿ ಮತ್ತಿತರ ಕಡೆ ಹಾನಿ ಸಂಭವಿಸಿದೆ. ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಬಂದ್ ಮಾಡಲಾಗಿತ್ತು.
ಹಾನಿಗೀಡಾದ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t