ಉಪ್ಪಿನಂಗಡಿ: ಗುಡ್ಡ ಕುಸಿದು ರಾ.ಹೆ.-75 ಬಂದ್:‌ ಪೊಲೀಸರು ಹೇಳಿದ್ದೇನು?

ಉಪ್ಪಿನಂಗಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ಸಾಗುವ ಸಾಧ್ಯತೆ ಇರುವುದರಿಂದ ಈ ರಸ್ತೆ ಮುಖೇನ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಹೆದ್ದಾರಿಯನ್ನು ಚತುಷ್ಪಥಗೊಳಿಸಲು ಗುಡ್ಡ ಅಗೆದು ರಸ್ತೆ ನಿರ್ಮಿಸಲಾಗಿದ್ದು, ಆಗಾಗ ಗುಡ್ಡ ಕುಸಿತ ಉಂಟಾಗುತ್ತದೆ. ನಿನ್ನೆ ರಾತ್ತಿ ಸುರಿದ ಅಪಾರ ಪ್ರಮಾಣದ ಮಳೆಯಿಂದಾಗಿ ಗುಡ್ಡ ಕುಸಿದು ಹೆದ್ದಾರಿ ಮೇಲೆಯೇ ಬಿದ್ದಿರುವುದರಿಂದ ರಸ್ತೆ ಬಂದ್‌ ಆಗಿದ್ದು, ವಾಹನಗಳು ರಸ್ತೆಯಲ್ಲೇ ಠಿಕಾಣಿ ಹೂಡಿವೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!