ಸಕಲೇಶಪುರ: ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ, ಎರಡೂ ಬಸ್‌ಗಳ ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಸಕಲೇಶಪುರ ತಾಲೂಕಿನ, ವೆಂಕಟಿಹಳ್ಳಿ ಗ್ರಾಮದ ಸಮೀಪ ನಡೆದಿದೆ.
ಮೂಡಿಗೆರೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಕಲೇಶಪುರಕ್ಕೆ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಗಾಯಾಳುಗಳಿಗೆ ಸಕಲೇಶಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.