ಬೆಳ್ತಂಗಡಿ: ಪತ್ನಿಯನ್ನೇ ಇರಿದು ಹತ್ಯೆ ಮಾಡಿದ ಪತಿ

ಬೆಳ್ತಂಗಡಿ: ಗಂಡ ಹೆಂಡತಿಯ ಜಗಳ ಉಂಡು ಮಲಗುವ ತನಕ ಎಂಬ ಗಾದೆಯನ್ನೇ ಸುಳ್ಳಾಗಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಈ ಘಟನೆಯಲ್ಲಿ ಗಂಡ ಹೆಂಡತಿ ಪರಸ್ಪರ ಜಗಳವಾಡಿ, ಕೊನೆಗೆ ಪತಿಯೇ ಪತ್ನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾನೆ.

ಝೀನತ್ (40) ಕೊಲೆಗೀಡಾದ ದುರ್ದೈವಿ. ಈಕೆಯ ಪತಿ ರಫೀಕ್ (47) ಕೊಲೆಗೈದ ಆರೋಪಿ.

ಇವರಿಬ್ಬರಿಗೆ ಸುಮಾರು 18 ವರ್ಷಗಳ ಮುಂಚೆ ವಿವಾಹವಾಗಿದ್ದು, ಇತ್ತೀಚೆಗೆ ಕೆಲವು ದಿನಗಳಿಂದ ಪರಸ್ಪರ ಜಗಳ ನಡೆಯುತ್ತಿತ್ತು. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳ ನಡೆದಿದೆ ಎನ್ನಲಾಗಿದ್ದು, ಅದರ ಮುಂದುವರಿದ ಭಾಗವಾಗಿ ರಫೀಕ್ ಸಿಟ್ಟಿನ ಕೈಗೆ ಬುದ್ಧಿ ಕೊಟ್ಟು ತನ್ನ ಮುದ್ದಿನ ಪತ್ನಿ ಝೀನತ್ ಅವರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿದ್ದ ಝೀನತ್  ರನ್ನು ಸ್ಥಳೀಯರು ಹಾಗೂ ಸಂಬಂಧಿಕರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗಿಲ್ಲ.

ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತನ್ನ ಹುಟ್ಟೂರು ತೆಕ್ಕಾರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿರುತ್ತಿದ್ದ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: ಅ.ಕ್ರ 64/2025 ಕಲಂ: 103(1) BNS 2023 ರಂತೆ ಪ್ರಕರಣ ದಾಖಲಾಗಿದೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!