ಬೆಳ್ತಂಗಡಿ : ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೋರ್ವರು ಅಸುನೀಗಿದ ಘಟನೆ ಇಂದು ಸುಮಾರು ಬೆಳಿಗ್ಗೆ 11 ರಿಂದ 12 ಗಂಟೆಯ ಅವಧಿಯಲ್ಲಿ, ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಸಂಭವಿಸಿದೆ.
ಸೌತಡ್ಕ ನಿವಾಸಿ ಬಾಲಕೃಷ್ಣ (60) ಮೃತ ದುರ್ದೈವಿ.
ಆನೆಯ ಏಟಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಬೆಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು, ಅರಣ್ಯಾಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ.