ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೌಕ್ರಾಡಿ ಗ್ರಾಮದಲ್ಲಿ ಗುಡ್ಡ ಕುಸಿತ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ನಂ.75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ, ಗುಡ್ಡ ಕುಸಿದ ಘಟನೆಯ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಹೆದ್ದಾರಿಯಲ್ಲಿ ಬೃಹತ್‌ ಪ್ರಮಾಣದ ಮಣ್ಣು ಕುಸಿದು ಬಿದ್ದಿದ್ದು ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ಮಣ್ಣು ತೆಗೆಯುವ ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರು ಮತ್ತು ವಾಹನ ಚಾಲಕರು ಬದಲಿ ರಸ್ತೆಯಲ್ಲಿ ಸಂಚರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!