ಧರ್ಮಸ್ಥಳ ಹೆಣ ಹೂತ ಪ್ರಕರಣ: ಯಾರ ಒತ್ತಡ ಬಂದ್ರೂ ಕೇರ್ ಮಾಡಲ್ಲ ಎಂದ ಸಿದ್ದು

ಮೈಸೂರು: ಧರ್ಮಸ್ಥಳ ಗ್ರಾಮದಲ್ಲಿ ಕೊಲೆಗೀಡಾದ ಹಲವಾರು ಮಂದಿಯ ಮೃತದೇಹಗಳನ್ನು ನಿಗೂಢ ವ್ಯಕ್ತಿಯೋರ್ವ ಹೂತು ಹಾಕಿರುವ ಪ್ರಕರಣದ ಎಸ್‌ಐಟಿ ತನಿಖೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಎಸ್​ಐಟಿ ರಚನೆ ಮಾಡಲ್ಲ ನಿಖೆ ಬಳಿಕ ಅಗತ್ಯವಿದ್ರೆ ಎಸ್. ಐ. ಟಿ ರಚನೆ ಮಾಡ್ತೀವಿ ಎಂದಿದ್ದಾರೆ.

ಪ್ರಕರಣ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕರು ಆಗ್ರಹಿಸಿದ್ದರು. ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಎಸ್.ಐ.ಟಿ ರಚನೆ ಮಾಡಲ್ಲ ಎಂದಿದ್ದಾರೆ.

ಯಾರೋ ಹೇಳಿದ್ರು ಅಂತ ಎಸ್. ಐ. ಟಿ ರಚನೆ ಮಾಡಲು ಆಗೋದಿಲ್ಲ. ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ರೆ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದ್ರೂ ನಾವು ಕೇರ್ ಮಾಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!