ಮಂಗಳೂರು: ಬಂಟ್ವಾಳ ಮತ್ತು ಮಂಗಳೂರು ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ಇಂದು (ದಿನಾಂಕ:19.07.2025) ರಂದು ರಜೆ ಘೋಷಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆಯಿಂದ ಸುರತ್ಕಲ್ ಮುಕ್ಕ ನಂದಿನಿ ನದಿ ಸೇತುವೆಯವರೆಗೆ, ಪೂರ್ವದಲ್ಲಿ ವಳಚ್ಚಿಲ್, ಅಡ್ಡೂರು ಸೇತುವೆ, ಎಡಪದವು ಬಜಪೆ ಎಕ್ಕಾರು ವರೆಗೆ ಮಂಗಳೂರು ತಾಲೂಕು ವ್ಯಾಪ್ತಿ ಬರಲಿದೆ. ಅದೇ ರೀತಿ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲೂ ರಜೆ ಘೋಷಿಸಲಾಗಿದೆ.