ಕುಂದಾಪುರದಲ್ಲಿ ಅಂಗಡಿಯ ಶಟರ್ ಮುರಿದು ಕಳ್ಳತನ: ನಾಲ್ವರ ಬಂಧನ

ಕುಂದಾಪುರ: ಉಡುಪಿಯ ಸಂತೆಕಟ್ಟೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು.

ಪೋಲೀಸರು ಆರೋಪಿಗಳಿಂದ 64 ಕೆಜಿ ತೂಕದ ಹಿತ್ತಾಳೆಯ ವಸ್ತು, 50 ಕೆಜಿ ತೂಕದ ತಾಮ್ರದ ಸರಿಗೆ, 20 ಕೆಜಿ ತೂಕದ ಅಲ್ಯೂಮಿನಿಯಂ ವಸ್ತು, ಫ್ರಿಡ್ಜ್ ಕಂಪ್ರಸರ್, 45 ಹಳೆಯ ಮೊಬೈಲ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕುಂದಾಪುರ ನಗರ ಠಾಣಾ ಎಸ್‌ಐಗಳಾದ ನಂಜಾ ನಾಯ್ಕ, ಪುಷ್ಪಾ, ಸಂಚಾರ ಎಸ್‌ಐ ನೂತನ್, ಸಿಬ್ಬಂದಿಗಳಾದ ಮೋಹನ್, ಸಂತೋಷ್, ಪ್ರಿನ್ಸ್, ನಾಗೇಶ್, ಮಹಾಬಲ, ರೇವತಿ, ಘನಶ್ಯಾಮ್, ಸತೀಶ್ ಪಾಲ್ಗೊಂಡಿದ್ದರು.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

error: Content is protected !!