ನಾರಾಯಣಪುರ: ಛತ್ತೀಸ್‌ಗಢದ ಅಬುಜ್ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಮಂದಿ ನಕ್ಸಲರು ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಛತ್ತೀಸ್‌ಗಢದ ಎಡಪಂಥೀಯ ಉಗ್ರವಾದದ ಭದ್ರಕೋಟೆಯಾದ ಅಬುಜ್ಮದ್ ಕೋರ್ ವಲಯದಲ್ಲಿ ನಕ್ಸಲರು ಇರುವ ಮಾಹಿತಿ ಮೇರೆಗೆ ಭದ್ರತಾ ಪಡೆಯು ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸಿದ್ದು ಈ ವೇಳೆ ಭದ್ರತಾ ಪಡೆ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ್ದು ಇದರ ಪರಿಣಾಮ ಆರು ಮಂದಿ ನಕ್ಸಲರು ಹತರಾಗಿದ್ದು ಕೆಲವರು ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದು ಅವರ ಹುಡುಕಾಟದ ಕಾರ್ಯಾಚರಣೆ ಮುಂದುವರೆದಿದೆ.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ AK-47 ಮತ್ತು SLR ರೈಫಲ್‌ಗಳು, ಸ್ಫೋಟಕ ವಸ್ತುಗಳು ಸೇರಿದಂತೆ ದಿನಬಳಕೆಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t