ಬ್ಯಾರಿಕೇಡ್‌ಗೆ ಅಂಬ್ಯುಲೆನ್ಸ್‌ ಢಿಕ್ಕಿ: ರೋಗಿ ಸಾವು

ಉಡುಪಿ: ರೋಗಿಯೊಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್‌ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗಳಿಗೆ ಢಿಕ್ಕಿ ಹೊಡೆದ ಪರಿಣಾಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ (ಜು.19) ಸಂಭವಿಸಿದೆ.

ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಅಪಘಾತದ ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!