ಮಂಗಳೂರು: ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು.
2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್., ಎಂ.ಸಿ.ಎಫ್.ನಂತಹ ಕಂಪೆನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು ಪ್ರಯತ್ನಿಸಲಾಗುವುದು. ಇದೇ ವೇಳೆ ಕಾಲೇಜಿಗೆ ಉತ್ತಮ ಕಂಪ್ಯೂಟರ್ ಲ್ಯಾಬ್ ನ ಅಗತ್ಯತೆಯೂ ಇದ್ದು ಈ ಬಗ್ಗೆ ಇನ್ಫೋಸಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಬಲ್ಮಠದ ಪಿಯು ಹಾಗೂ ಡಿಗ್ರಿ ಕಾಲೇಜಿನ ಮಾದರಿಯಲ್ಲೇ ಕಂಪ್ಯೂಟರ್ ಗಳನ್ನು ಒದಗಿಸುವ ಭರವಸೆಯನ್ನು ಸಂಸ್ಥೆಯವರು ನೀಡಿದ್ದು, ಭವಿಷ್ಯದಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಎರಡೂ ಕ್ಷೇತ್ರದಲ್ಲಿ ಈ ಕಾಲೇಜನ್ನು ಉನ್ನತೀಕರಣಗೊಳಿಸಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸಲು ಸರ್ವ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ವರಿ, ಕಾಲೇಜು ಪ್ರಾಂಶುಪಾಲರಾದ ಭಾರತಿ, ನಿರಂಜನ್, ಅನುಸೂಯ, ಶ್ರೀನಿವಾಸ್, ಸೇರಿದಂತೆ ಕಾಲೇಜಿನ ಶಿಕ್ಷಕರು, ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.