ಡಿಕೆಶಿ ಬೆಂಗಾವಲು ವಾಹನ ಪಲ್ಟಿ: ಇಬ್ಬರು ಸಿಬ್ಬಂದಿಗೆ ಗಾಯ

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬೆಂಗಾವಲು ವಾಹನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅಪಘಾತಕ್ಕೀಡಾಗಿ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಈ ವೇಳೆ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕೆ ಶಿವಕುಮಾರ್ ಮೈಸೂರಿನಲ್ಲಿ ಸಾಧನಾ ಸಮಾವೇಶವೊಂದನ್ನು ಮುಗಿಸಿ ಬೆಂಗಳೂರಿಗೆ ವಾಪಸ್ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದೆ. ಬೆಂಗಾವಲು ವಾಹನವು ಡಿಕೆ ಶಿವಕುಮಾರ್ ಅವರ ಕಾರನ್ನು ಹಿಂಬಾಲಿಸುತ್ತಿತ್ತು. ಗೌಡಹಳ್ಳಿ ಬಳಿಯ ಎಕ್ಸ್‌ಪ್ರೆಸ್ ಹೈವೇಯಲ್ಲಿ ವಾಹನವು ರಸ್ತೆಯ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ಘಟನೆಯಿಂದಾಗಿ ಎಸ್ಕಾರ್ಟ್ ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝

error: Content is protected !!