ಬಂಟ್ವಾಳ: ಬಂಟ್ವಾಳ ಪುರಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ಮುಂದಾಳು ಜನಾರ್ದನ ಚಂಡ್ತಿಮಾರ್ (55) ಅವರ ಇಂದು ಮುಂಜಾನೆ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಪಕ್ಷದ ವಿವಿಧ ಹುದ್ದೆಗಳಲ್ಲಿ ಭಾಗಿಯಾಗಿದ್ದು, ದಲಿತ ಸಂಘಟನೆಗಳಲ್ಲೂ ಸಕ್ರೀಯರಾಗಿದ್ದಾರೆ.
ಪುರಸಭೆಯಲ್ಲಿ ತನ್ನ ಪ್ರಖರ ಮಾತುಗಳ ಮೂಲಕ ಅಧಿಕಾರಿಗಳ ಬಳಿ ಜನರ ಕೆಲಸವನ್ನು ಮಾಡಿಕೊಂಡುವಂತೆ ಎಚ್ಚರಿಸುತ್ತಿದ್ದರು. ಅವರ ನಿಧನಕ್ಕೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ವಿವಿಧ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t