ಅಹಮದಾಬಾದ್: ಅಹಮದಾಬಾದ್ ನ ಬಾವ್ಲಾದಲ್ಲಿ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿಪುಲ್ ಕಾಂಜಿ ವಾಘೇಲಾ (34), ಅವರ ಪತ್ನಿ ಸೋನಾಲ್ (26) ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು (11 ಮತ್ತು 05) ಮತ್ತು ಒಬ್ಬ ಮಗ (08) ಪ್ರಾಣ ಕಳೆದುಕೊಂಡಿದ್ದಾರೆ.
ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದು ಇವರು ಮೂಲತಃ ಧೋಲ್ಕಾದವರು ಎನ್ನಲಾಗಿದೆ. ಇಡೀ ಕುಟುಂಬ ವಿಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ (ಜು.20) ತಿಳಿಸಿದ್ದಾರೆ.
ಮೃತರ ಆತ್ಮಹ*ತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಹಣಕಾಸು ಬಿಕ್ಕಟ್ಟಿನ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t