ಮುಂಬೈ: 2006ರಲ್ಲಿ ಮುಂಬೈನಲ್ಲಿ ಸಂಭವಿಸಿದ ಸರಣಿ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಾಂಬೆ ಹೈಕೋರ್ಟ್ ಎಲ್ಲಾ 12 ಆರೋಪಿಗಳನ್ನು ಬಿಡುಗಡೆಗೊಳಿಸಿದೆ.
2006ರ ಜುಲೈ 11ರಂದು ಮುಂಬೈ ರೈಲುಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿ 188ಮಂದಿ ಬಲಿಯಾಗಿದ್ದರು. ಕಮಲ್ ಅಹ್ಮದ್ ಅನ್ಸಾರಿ (37), ತನ್ವೀರ್ ಅಹ್ಮದ್ ಅನ್ಸಾರಿ (37), ಮೊಹಮ್ಮದ್ ಫೈಸಲ್ ಶೇಕ್ (36), ಇತೇಶಂ ಸಿದ್ದಿಕಿ (30), ಮೊಹಮ್ಮದ್ ಮಾಜಿದ್ ಶಫಿ (32), ಶೇಕ್ ಅಲಾಂ ಶೇಕ್ (41), ಮೊಹಮ್ಮದ್ ಸಾಜಿದ್ ಅನ್ಸಾರಿ (34), ಮುಜಾಮಿಲ್ ಶೇಕ್ (27), ಸೋಹಿಲ್ ಮೊಹಮ್ಮದ್ ಶೇಕ್ (43), ಜಮೀರ್ ಅಹ್ಮದ್ ಶೇಕ್ (36), ನಾವೆದ್ ಹುಸೇನ್ ಖಾನ್ (30) ಮತ್ತು ಆಸಿಫ್ ಖಾನ್ (38) ಆರೋಪಿಗಳು.
ಎಟಿಎಸ್ ಚಾರ್ಜ್‌ಶೀಟ್ ಪ್ರಕಾರ, ರೈಲುಗಳಲ್ಲಿ ಸರಣಿ ಸ್ಫೋಟಕ್ಕೆ ಬಳಸಲಾದ ಬಾಂಬ್‌ಗಳನ್ನು ಮುಂಬೈ ಹೊರವಲಯದ ಗೋವಾಂಡಿ ಪ್ರದೇಶದಲ್ಲಿರುವ ಕೊಠಡಿಯೊಂದರಲ್ಲಿ ತಯಾರಿಸಲಾಗಿತ್ತು. ಈ ವೇಳೆ ಹಲವು ಪಾಕ್ ಮೂಲದ ಪ್ರಜೆಗಳು ಹಾಜರಿದ್ದರು. ಆರ್‌ಡಿಎಕ್ಸ್ ಮತ್ತು ಅಮೋನಿಯಂ ನೈಟ್ರೇಟ್ ಮಿಶ್ರಣವನ್ನು ಸ್ಫೋಟಕ್ಕೆ ಬಳಸಲಾಗಿತ್ತು. ಆದರೆ ಈ ಪ್ರಕರಣದ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಈ ತೀರ್ಪನ್ನು ನ್ಯಾಯಮೂರ್ತಿ ಅನಿಲ್ ಕಿಲೋರ್ ಮತ್ತು ನ್ಯಾಯಮೂರ್ತಿ ಎಸ್.ಜಿ. ಚಂದಕ್ ಅವರ ವಿಭಾಗೀಯ ಪೀಠ ನೀಡಿತು. ಈ ಪ್ರಕರಣದಲ್ಲಿ ಒಟ್ಟು 12 ಆರೋಪಿಗಳನ್ನು ಈ ಹಿಂದೆ ಕೆಳ ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿತ್ತು, ಅದರಲ್ಲಿ 5 ಜನರಿಗೆ ಮರಣದಂಡನೆ ಮತ್ತು 7 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಆದಾಗ್ಯೂ, ಹೈಕೋರ್ಟ್‌ನಲ್ಲಿ ವಿಚಾರಣೆಯ ಸಮಯದಲ್ಲಿ, 11 ಆರೋಪಿಗಳನ್ನು ಬಿಡುಗಡೆಗೊಳಿಸಲಾಯಿತು.
ಮೂಲಗಳ ಪ್ರಕಾರ, ಈ ಪ್ರಕರಣದ ಅಂತಿಮ ವಿಚಾರಣೆ ಈ ವರ್ಷದ ಜನವರಿಯಲ್ಲಿ ಪೂರ್ಣಗೊಂಡಿತು, ನಂತರ ತೀರ್ಪನ್ನು ಕಾಯ್ದಿರಿಸಲಾಯಿತು. ಅಪರಾಧಿಗಳು ಯೆರವಡಾ, ನಾಸಿಕ್, ಅಮರಾವತಿ ಮತ್ತು ನಾಗ್ಪುರ ಜೈಲುಗಳಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದಲ್ಲಿ ತಮ್ಮ ಉಪಸ್ಥಿತಿಯನ್ನು ಗುರುತಿಸಿದ್ದರು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19