ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ

ಮಂಗಳೂರು: ವಿದ್ಯಾರ್ಥಿ ಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆಯನ್ನು ಪುಸ್ತಕಗಳಲ್ಲಿ ಓದುವ ಮೂಲಕ ಅವರ ಅದರ್ಶ ಗುಣಗಳನ್ನು ತನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಂಬಯಿ ಉದ್ಯಮಿ ರಘರಾಮ ಶೆಟ್ಟಿ ಬೋಳ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರು ತಾಲ್ಲೂಕು ಪಂಚಾಯತ್ ಅನುದಾನದಿಂದ ಪೀಠೋಪಕರಣ ಹಾಗೂ ಚೇಳೈರು ಗ್ರಾಮ ಪಂಚಾಯತ್ ವತಿಯಿಂದ ಗ್ರಂಥಾಲಯಕ್ಕೆ ಪೀಠೋಪಕರಣ ಮತ್ತು ಪುಸ್ತಕ ಹಸ್ತಾಂತರ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಇರುವ ಸರಕಾರಿ ಶಾಲೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಮಾದರಿ ಶಾಲೆಯಾಗಿ ಈ ಮಟ್ಟಕ್ಕೆ ಬೆಳೆದಿರುವುದು ಶ್ಲಾಘನೀಯ ಶಾಲೆಯನ್ನು ಕಂಡು ಬಹಳ ಸಂತುಷ್ಟನಾಗಿದ್ದೇನೆ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ ಶಾಲೆಯವರ ಬೇಡಿಕೆಯಾದ ಮಕ್ಕಳಿಗೆ ಒಂದು ಬಸ್ ನ್ನು ತನ್ನ ವತಿಯಿಂದ ನೀಡುವುದಾಗಿ ಹೇಳಿದರು .

ಮುಖ್ಯ ಅತಿಥಿಯಾಗಿ ಮುಂಬಯಿ ವಿ.ಕೆ,ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು, ಚೇಳೈರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಅಭಿವೃದ್ಧಿ ಅಧಿಕಾರಿ ನಿತ್ಯಾನಂದ, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್,ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಪಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಅನಿಲ್ ಸಾಲ್ಯಾನ್, ಸದಸ್ಯರಾದ ಪೂರ್ಣಿಮ,ಪರಮೇಶ್ವರ,ರಿತೇಶ್ ಶೆಟ್ಟಿ, ಸಾಯಿನಾಥ್ ಶೆಟ್ಟಿ ಮುಂಡ್ಕೂರು,ಧನಪಾಲ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಕುಸುಮಾ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ ವಹಿಸಿದ್ದರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು ಶಿಕ್ಷಕಿ ಶೈಲಾ ಧನ್ಯವಾದ ಸಮರ್ಪಿಸಿದರು ಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರು ಪೀಠೋಪಕರಣ ಮತ್ತು ಪುಸ್ತಕ ಹಸ್ತಾಂತರ ಮಾಡಿದರು.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

 

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!