ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಪಲ್ಟಿ: ಓರ್ವ ಮೃತ್ಯು, ಹಲವರಿಗೆ ಗಂಭೀರ‌ ಗಾಯ

ಅಂಕೋಲಾ: ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪ‌ರ್ ಬಸ್ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ ಜಗದೀಶ ಡಾಬಾ ಎದುರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ನಸುಕಿನ ವೇಳೆ ವರದಿಯಾಗಿದೆ.

ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಬಸ್ಸಿನಲ್ಲಿದ್ದ ಪ್ರಯಾಣಿಕರು ನಿದ್ರೆಯಲ್ಲಿದ್ದ ಸಮಯದಲ್ಲಿ ಬಸ್ ಕುಸಿದು ಬಿದ್ದ ಶಬ್ದಕ್ಕೆ ಪ್ರಯಾಣಿಕರು ಬೆಚ್ಚಿಬಿದ್ದಿದ್ದು, ಕೆಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಮತ್ತು ಅಂಕೋಲಾ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಬಸ್‌ ಮೇಲಕ್ಕೆತ್ತುವ ಸಂದರ್ಭದಲ್ಲಿ ಬಸ್ಸಲ್ಲಿ ಸಿಲುಕಿಕೊಂಡಿದ್ದ ಓರ್ವನ ಮೃತದೇಹ ಹೊರತೆಗೆಯಲಾಯಿತು. ಗಾಯಾಳುಗಳನ್ನು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

 

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!