ಮಂಗಳೂರು: ನಗರದಲ್ಲೆಡೆ ತುಸು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಅನಾಹುತಗಳು ಸಂಭವಿಸಿದ್ದು ಮಂಗಳೂರು ನಗರದ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಪಾಂಡೇಶ್ವರದ ಪೋರ್ಟ್ ವಾರ್ಡ್ ಸಂಖ್ಯೆ 45 ರಲ್ಲಿ ಮನೆಯೊಂದಕ್ಕೆ ತೀವ್ರ ಹಾನಿಯಾದ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸತತ ಮಳೆಯಿಂದಾಗಿ ಸೇಸಪ್ಪ ಎಂಬುವವರ ಮನೆಗೆ ತೀವ್ರ ಹಾನಿಯುಂಟಾಗಿದೆ. ಗೋಡೆಗಳು ಸಂಪೂರ್ಣ ಜರಿದಿದ್ದರೂ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕೂಡಲೇ ಈ ಮನೆಯವರಿಗೆ ಗರಿಷ್ಠ ಮಟ್ಟದ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದೇ ಕ್ರಮಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ನಾರಾಯಣ ಗಟ್ಟಿ, ಅನಿಲ್ ಕುಮಾರ್, ಸುರೇಶ್ ಕುಮಾರ್ ಎಂ., ವಸಂತ ಕುಮಾರ್ ಸೇರಿದಂತೆ ಪಾಲಿಕೆಯ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19