ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮಹಿಳಾ ಆಯೋಗದಿಂದ ಪತ್ರ

ಬೆಂಗಳೂರು: ಧರ್ಮಸ್ಥಳದ ಸುತ್ತ ಮುತ್ತ ಮಹಿಳೆಯರು, ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣದ ತನಿಖೆಯನ್ನು ನಿನ್ನೆ(ಜು.20) ರಾಜ್ಯ ಸರ್ಕಾರ ಎಸ್.​ಐ.ಟಿ. ಗೆ ವಹಿಸಿತ್ತು. ಈ ಬೆನ್ನಲ್ಲೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಡಾ.ನಾಗಲಕ್ಷ್ಮೀ ಚೌಧರಿ ಎಸ್.​ಐ.ಟಿ. ರಚನೆ ಮಾಡುವಂತೆ ಜುಲೈ 14ರಂದು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದರು. ಆ ಬೆನ್ನಲ್ಲೇ ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್.​ಐ.ಟಿ. ರಚನೆ ಮಾಡಿದೆ. ಎಸ್.​ಐ.ಟಿ. ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಆಯೋಗವು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯಾಗಬೇಕು. ಒಂದು ವೇಳೆ ಆರೋಪ ನಿಜವಾದಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ತಮ್ಮವರನ್ನ ಕಳೆದುಕೊಂಡ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಮೂಲಕ ಇದು ಒಂದು ದೊಡ್ಡ ಪಾಠವಾಗಬೇಕು. ಅಮಾಯಕರ ಜೀವದ ಜೊತೆ ಚೆಲ್ಲಾಟವಾಡೋರಿಗೆ ಪಾಠವಾಗಬೇಕು. ಪ್ರತಿಯೊಂದು ಹೆಣ್ಣುಮಗು ಭಯಮುಕ್ತರಾಗಿ ಬದುಕುವಂತ ವಾತಾವರಣ ಸೃಷ್ಟಿಯಾಗಬೇಕು. ಯಾವುದೇ ಹೆಣ್ಣಿಗೂ ಈ ನೆಲದಲ್ಲಿ ಅನ್ಯಾಯವಾಗಬಾರದು. ಒಂದು ವೇಳೆ ತೊಂದರೆಯಾದ್ರೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವಂತಹ ಭಯ ಮುಕ್ತ ವಾತಾವರಣ ಸೃಷ್ಟಿಯಾಗಬೇಕು ಎಂದು ಎಂದು ಮಹಿಳಾ ಆಯೋಗ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

 

ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t

 

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!