ವಿಟ್ಲ: ವೀರಕಂಬ ಗ್ರಾಮದ ಕೆಲಿಂಜದಲ್ಲಿ ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ಆಲ್ಟೊ ಕಾರು ವಿಟ್ಲದಿಂದ ಕಲ್ಲಡ್ಕ ಕಡೆ ಚಲಿಸುತ್ತಿದ್ದ ಮಿನಿ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಮೃತಪಟ್ಟಿದ್ದು ಹಾಗೂ ಆತನ ಸಹೋದರಿ ಮತ್ತು ಮಗು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರ (ಜು.21) ರಂದು ಮಿನಿ ಟಿಪ್ಪರ್ ಮತ್ತು ಆಲ್ಟೊ ಕಾರು ಮುಖಾಮುಖಿ ಢಿಕ್ಕಿಯಾಗಿದ್ದು, ಈ ಪರಿಣಾಮವಾಗಿ ಕಾರಿನಲ್ಲಿದ್ದ ಚಾಲಕ ಮೃತಪಟ್ಟಿದ್ದಾರೆ ಮತ್ತು ಆತನ ಸಹೋದರಿ ಹಾಗೂ ಮಗು ಗಂಭೀರ ಗಾಯಗೊಂಡಿದ್ದರು.
ಗಾಯಳುಗಳನ್ನು ಅನಂತಾಡಿ ಗ್ರಾಮದ ಆಶ್ವತ್ತಡಿ ಮೂಲದವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕೆತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ತಡರಾತ್ರಿ ಚಾಲಕ ಅನೀಶ್ ಅನಂತಾಡಿ (34) ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19