ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾದನಾಯ ಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಸ್ನೇಹಿತರ ರ‍್ಯಾಗಿಂಗ್ ಗೆ ಹೆದರಿ ಆರ್ಕಿಟೆಕ್ಚರ್ ಟಾಪರ್ ವಿದ್ಯಾರ್ಥಿ ಅರುಣ್ (22) ಸೆಲ್ಫಿ ವೀಡಿಯೋ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಇವರು ಚನ್ನಕೇಶವ ಹಾಗೂ ತುಳಸಿ ದಂಪತಿಯ ಹಿರಿಯ ಪುತ್ರ. ಈತ ಮೂಲತಃ ಹಾಸನದವನಾಗಿದ್ದು, ಮಕ್ಕಳ ಶಿಕ್ಷಣ ಹಾಗೂ ಕೆಲಸ ಅರಸಿಕೊಂಡು ಬಂದಿದ್ದ ಈ ಕುಟುಂಬ ಬೆಂಗಳೂರು ಉತ್ತರ ತಾಲೂಕಿನ ನಂದರಾಮಯ್ಯನ ಪಾಳ್ಯದಲ್ಲಿ ವಾಸವಾಗಿದ್ದಾರೆ.
ಮೂಟೆ ಹೊತ್ತು ಕೂಲಿ ಕೆಲಸ ಮಾಡಿ ಮಕ್ಕಳನ್ನು ಸಾಕುತ್ತಿದ್ದ ದಂಪತಿಯ ಪುತ್ರನಾಗಿದ್ದ ಅರುಣ್ ಶಾಲಾ, ಕಾಲೇಜಿನಲ್ಲೇ ಟಾಪರ್ ಆಗಿದ್ದ, ಇದರಿಂದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಫ್ರೀ ಸೀಟ್ ಪಡೆದುಕೊಂಡಿದ್ದ. ಈತ 5 ನಿಮಿಷದಲ್ಲಿ ಭಾವಚಿತ್ರ, ವಿಭಿನ್ನ ಚಿತ್ರಗಳನ್ನು ಬಿಡಿಸುತ್ತಿದ್ದು, ಸಿನೆಮಾ ತಾರೆಯರ ಭಾವಚಿತ್ರ ಬಿಡಿಸಿ ಮೆಚ್ಚುಗೆ ಗಳಿಸಿದ್ದ.
ಅರುಣ್ ಕಾಲೇಜಿನಿಂದ ಇದೇ ತಿಂಗಳ 10 ತಾರೀಕಿಗೆ ಮನೆಗೆ ಬಂದಿದ್ದು 11ರಂದು ತಂದೆ ತಾಯಿ ಕೆಲಸಕ್ಕೆ ತೆರಳಿದ ಬಳಿಕ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದಾನೆ.
ನೀವಿನ್ನು ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದರೆ ಈಗಲೇ ಡ್ರೀಮ್ ಡೀಲ್ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/JaPBl9THV4d0QHbJzEdgVQ?mode=r_t
ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19