ಮಂಗಳೂರು: ಬಿಜೆಪಿ ಯುವ ಮುಖಂಡ, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕ್ರಿಯಾಶೀಲ ಬಿಜೆಪಿ ಯುವ ಮುಖಂಡರಾಗಿದ್ದ, ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸಾರ್ವಜನಿಕರಲ್ಲಿ ದಿಗ್ಭ್ರಮೆ ಮೂಡಿಸಿದೆ.
ನಿನ್ನೆ ರಾತ್ರಿ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಲ್ಲದೆ ಮಂಗಳೂರು ಉತ್ತರ ಶಾಸಕ ಡಾ. ಭಾರತ್ ಶೆಟ್ಟಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರು ಕ್ರಿಯಾಶೀಲ ಯುವ ನಾಯಕರಾಗಿದ್ದರು.
ಪರ್ಸನಲ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ತಮ್ಮ ಸಮಸ್ಯೆಯನ್ನೂ ಯಾರೊಂದಿಗೂ ತಿಳಿಸಿಕೊಂಡಿರಲಿಲ್ಲ. ಸದಾ ನಗುತ್ತಾ ಇರುತ್ತಿದ್ದ ಅವರು ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿಲ್ಲ ಎಂದು ಅವರ ಆತ್ಮೀಯರು ತಿಳಿಸಿದ್ದಾರೆ. ಹೋಟೆಲ್ ಸೇರಿ ಹಲವು ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.