ಚಾಕು ತೋರಿಸಿ ಪ್ರೀತಿಸು ಎಂದು ಅಪ್ರಾಪ್ತ ಬಾಲಕಿಗೆ ಬೆದರಿಕೆ

ಮುಂಬೈ: ಮಹಾರಾಷ್ಟ್ರದ ಸತಾರಾ ನಗರದ ಕರಂಜೆ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ಪ್ರೀತಿಸುವಂತೆ ಬೆದರಿಕೆ ಹಾಕಿ, ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಈ ಯುವಕ 10ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಬಾಲಕಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ಆಕೆಯನ್ನು ತಡೆದು ಪ್ರೀತಿಸುವಂತೆ ಕೇಳಿದ್ದಾನೆ. ಬಾಲಕಿ ಬೇಡಿಕೊಂಡರೂ ಬಿಡದೆ, ಚಾಕು ತೋರಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ.

ಬಾಲಕಿ ಪೋಷಕರು ಕೂಡ ಯುವಕನಿಗೆ ಬುದ್ಧಿ ಹೇಳಲು ಯತ್ನಿಸಿ, ನನ್ನ ಮಗಳನ್ನು ಬಿಡು ಎಂದು ಬೇಡಿಕೊಂಡಿದ್ದಾರೆ ಆದರೆ ಯುವಕ ಚಾಕು ಕೈಯಲ್ಲಿ ಹಿಡಿದು ಕೊಲ್ಲುವ ಬೆದರಿಕೆ ಹಾಕಿದ್ದಾನೆ.

ಇದೇ ವೇಳೆ ಅಲ್ಲೇ ಇದ್ದ ಸ್ಥಳೀಯರೂ ಕೂಡ ಯುವಕನನ್ನು ತಡೆಯಲು ಸಾಕಷ್ಟು ಯತ್ನಿಸಿದ್ದಾರೆ. ಹಿಂದಿನಿಂದ ಬಂದ ಸ್ಥಳೀಯರೊಬ್ಬರೂ ಕೊನೆಗೂ ಆ ಯುವಕನ ಕೈಯಿಂದ ಚಾಕು ಕಸಿದು ಬಾಲಕಿಯನ್ನು ರಕ್ಷಿಸಿದ್ದಾರೆ. ಸ್ಥಳೀಯರ ಚಾಕಚಕ್ಯತೆಯಿಂದ ಬಾಲಕಿ ಪ್ರಾಣ ಉಳಿದಿದೆ.

ಹುಡುಗಿಯನ್ನು ರಕ್ಷಿಸಿದ ನಂತರ ಕೋಪಗೊಂಡ ಜನರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಜನರಿಂದ ಯುವಕನನ್ನು ರಕ್ಷಿಸಿ, ಆತನನ್ನು ಶಾಹುಪುರಿ ಪೊಲೀಸ್‌ ಠಾಣೆಗೆ ಕರೆದೊಯ್ಯಲಾಯಿತು.

 

ನೀವಿನ್ನೂ ಡ್ರೀಮ್ ಡೀಲ್ ಗ್ರೂಪ್ ಸೇರಿಲ್ಲವೇ? ಹಾಗಾದ್ರೆ ಈಗಲೇ ಗ್ರೂಪ್ ಜಾಯಿನ್ ಆಗಿ ಖಚಿತ ಬಹುಮಾನಗಳನ್ನು ಗೆಲ್ಲಿರಿ🤝
https://chat.whatsapp.com/KNFvpivMSm9KnMzmbPMYGj

ಮಂಗಳೂರಿನಲ್ಲಿ ಮನೆ-ಫ್ಲ್ಯಾಟ್ ಖರೀದಿ, ಮಾರಾಟ ಮತ್ತು ಬಾಡಿಗೆಗೆ CITY PROPERTIES ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಬಳಸಿಕೊಳ್ಳಿ👇
https://whatsapp.com/channel/0029VbARfil9mrGlVgUEnJ19

error: Content is protected !!